ಅಂಬೇಡ್ಕರ್ ಜೀವನಾಧಾರ ಮಹಾನಾಯಕ ಧಾರವಾಹಿಗೆ ವಿದ್ಯುತ್ ಅಡಚಣೆ ಆಗದಂತೆ ಒತ್ತಾಯಿಸಿ ಮನವಿ.

ಸಿರಿನಾಡ ಸುದ್ದಿ, ಸಿರುಗುಪ್ಪ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರವರ ಜೀವನ ಚರಿತ್ರೆಯನ್ನು ಬಿಂಬಿಸುವ ಧಾರವಾಹಿ ಸಮಯದಲ್ಲಿ ವಿದ್ಯುತ್ ಅಡಚಣೆ ಆಗದಂತೆ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಪ್ರತಿಯೊಬ್ಬರಿಗೂ ಅಂಬೇಡ್ಕರ್‌ರವರ ಜೀವನ ಅದರ್ಶಗಳು ಮತ್ತೊಬ್ಬರಿಗೆ ಅದರ್ಶವಾಗುವ ನಿಟ್ಟಿನಲ್ಲಿ ಸಹಕಾರ ನೀಡುವಂತೆ ಒತ್ತಾಯಿಸಿದರು.
ನಗರದ ಅಂಬೇಡ್ಕರ್ ಜನಪರ ವೇದಿಕೆ ತಾಲ್ಲೂಕು ಘಟಕದ ವತಿಯಿಂದ ಶನಿವಾರ ಮತ್ತು ಭಾನುವಾರ ಸಂಜೆ 6.00 ರಿಂದ 7.00 ಗಂಟೆ ರವರೆಗೆ ಜೀ ಕನ್ನಡ ವಾಹಿನಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಜೀವನ ಕಥೆಯಾಧಾರಿತ ಮಹಾನ್ ನಾಯಕ ಡಾ. ಬಿ.ಆರ್ ಅಂಬೇಡ್ಕರ್ ಧಾರವಾಹಿ ಪ್ರಸಾರವಾಗುವ ಸಮಯದಲ್ಲಿ ವಿದ್ಯುತ್ ವ್ಯತ್ಯಯ ಆಗದಂತೆ ನೋಡಿಕೊಳ್ಳಬೇಕೆಂದು ಒತ್ತಾಯಿಸಿ ಸಂಘಟನೆಯ ತಾಲೂಕ ಅಧ್ಯಕ್ಷ ಡಿ.ಗೋವಿಂದ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಶ್ರೀನಿವಾಸರಿಗೆ ಮನವಿ ಸಲ್ಲಿಸಿದರು.
ಇದೆ ಸಂದರ್ಭದಲ್ಲಿ ಅಂಬೇಡ್ಕರ್ ಜನಪರ ವೇದಿಕೆಯ ಉಪಾಧ್ಯಕ್ಷ ಎಚ್.ಎಸ್.ಬಸವರಾಜ, ಕಾರ್ಯದರ್ಶಿ ಶ್ರೀಶೈಲ, ಸಹ ಕಾರ್ಯದರ್ಶಿ ಬಸವಂತ ಮಾರೆಪ್ಪ, ಸಂಘಟನಾ ಕಾರ್ಯದರ್ಶಿ ಶ್ರೀಧರ್ ಹಾಗೂ ಎಲ್ಲಾ ಸದಸ್ಯರು ಇದ್ದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Share via
Copy link
Powered by Social Snap