ಉದ್ಯೋಗಕ್ಕೆ ಅಗತ್ಯವಿರುವ ಕೌಶಲ್ಯ ಕಲಿಸಿಕೊಡಿ – ಆರ್.ವೆಂಕಟೇಶ ಕುಮಾರ್

ಸಿರಿನಾಡ ಸುದ್ದಿ, ರಾಯಚೂರು: ಜಿಲ್ಲೆಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಉದೋಗ್ಯಕ್ಕಾಗಿ ಬೇಕಾದ ವೃತ್ತಿ ಕೌಶಲ್ಯ ಬೆಳೆಸಿಕೊಳ್ಳಲು ಅನುಕೂಲವಾಗಲು, ಶಿಕ್ಷಕರಿಗೆ ಮೂರು ದಿನಗಳ “ಫ್ಯಾಕಲ್ಟಿ ಡೆವಲಪ್‌ಮೆಂಟ್ ವರ್ಕ್ಶಾಪ್” ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಶಿಕ್ಷಕರಿಗೆ ಸಲಹೆ ನೀಡಿದರು.
ಮಂಗಳವಾರ ನಗರದ ಕೃಷಿ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹ ಸಭಾಂಗಣದಲ್ಲಿ ಮಹತ್ವಾಕಾಂಕ್ಷೆ ಜಿಲ್ಲೆಗಳ ಯೋಜನೆಯಡಿ ಜಿಲ್ಲಾಡಳಿತ, ಉದ್ಯೋಗಾವಕಾಶಗಳು ಮತ್ತು ಕಲಿಕಾ ಕೇಂದ್ರ (ಸಿ-ಇಒಎಲ್) ಮತ್ತು ಚೆನ್ನೆöÊನ ಪ್ಯಾನ್‌ಟೆಕ್ ಇ-ಲನಿಂರ್ಗ್ನ ಸಯುಂಕ್ರಾಶ್ರಯದಲ್ಲಿ “ಫ್ಯಾಕಲ್ಟಿ ಡೆವಲಪ್‌ಮೆಂಟ್ ವರ್ಕ್ಶಾಪ್” ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿ ಸಾಧನೆ ಹಿಂದೆ ಶಿಕ್ಷಕರ ಶ್ರಮ ಅಪಾರವಾಗಿರುತ್ತದೆ. ಶಿಕ್ಷಕರನ್ನು ದೇಶದ ಶಿಲ್ಪಿಗಳು ಎಂದು ಕರೆಯುತ್ತಾರೆ, ಶಿಕ್ಷಕರು ಮಕ್ಕಳಿಗೆ ಹೊಸ ತಂತ್ರಜ್ಞಾನ, ಯಂತ್ರೋಪಕರಣಗಳು ಹಾಗೂ ವಿಜ್ಞಾನಿಗಳ ಸಾಧನೆ ಬಗ್ಗೆ ಬೆಳಕು ಚೆಲ್ಲುವ ಕೆಲಸ ಮಾಡಬೇಕಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿದೆ. ಸಂವಿಧಾನ ಬದ್ಧವಾಗಿ ಮಕ್ಕಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಪ್ರತಿ ನಿತ್ಯ ಶಾಲೆಯ ತರಗತಿಗಳು ಆರಂಭ ಪೂರ್ವದಲ್ಲಿ ಮಕ್ಕಳಿಗೆ ಕೌಶಲ್ಯ ಬಗ್ಗೆ ತರಬೇತಿ ನೀಡುವ ಕೆಲಸ ಮಾಡಿದಾಗ ಮಾತ್ರ ಜಿಲ್ಲೆಯಲ್ಲಿ ನಿರುದ್ಯೋಗ ಸಮಸ್ಯೆ ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂದರು.
ನಿರುದ್ಯೋಗ ಸಮಸ್ಯೆಯನ್ನು ನಿಯಂತ್ರಿಸಲು ಈ ಭಾಗದ ಜನರಲ್ಲಿ ವೃತ್ತಿ ಕೌಶಲ್ಯ ಬಗ್ಗೆ ಹೆಚ್ಚು ತರಬೇತಿ ನೀಡಿ ಉದ್ಯೋಗ ಅವಕಾಶಗಳು ದೊರೆಯುವಂತೆ ಮಾಡಬೇಕಾಗಿದೆ. ಉದ್ಯೋಗಕ್ಕಾಗಿ ಜಿಲ್ಲೆಯಿಂದ ಗುಳೆ ಹೋಗುವವರ ಪ್ರಮಾಣ ಹೆಚ್ಚಿದೆ, ಕೇಂದ್ರ ಸರ್ಕಾರವು ದೇಶದಲ್ಲಿ 117 ಜಿಲ್ಲೆಗಳು ಅಭಿವೃದ್ಧಿಯಲ್ಲಿ ಅತಿ ಹಿಂದುಳಿದಿರುವದನ್ನು ಗುರುತಿಸಿ ನೀತಿ ಆಯೋಗದಡಿ ಮಹತ್ವಾಕಾಂಕ್ಷಿ ಜಿಲ್ಲೆಗಳೆಂದು ಆಯ್ಕೆ ಮಾಡಿ ಈ ಜಿಲ್ಲೆಗಳಲ್ಲಿ ಶಿಕ್ಷಣ, ಆರೋಗ್ಯ, ಕೌಶಲ್ಯ, ಕೃಷಿ ಮತ್ತು ಆರ್ಥಿಕ, ಮಕ್ಕಳಿಗೆ ಪೌಷ್ಟಿಕ ಆಹಾರ ಸೇರಿದಂತೆ ಎಲ್ಲ ಕ್ಷೇತ್ರದಲ್ಲಿ ಸಮಗ್ರವಾಗಿ ಅಭಿವೃದ್ಧಿ ಹೊಂದಬೇಕೆAಬ ಸಂಕಲ್ಪ ಹೊಂದಿದೆ ಎಂದರು.
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಸಂವಿಧಾನ 371(ಜೆ) ಕಲಂ ಜಾರಿಯಾಗಿರುವುದರಿಂದ ಈ ಭಾಗದಲ್ಲಿ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಲಾಗಿದೆ. ಉದ್ಯೋಗ ಪಡೆಯಬೇಕಾದರೆ ವೃತ್ತಿ ಕೌಶಲ್ಯ ಅತಿ ಅವಶ್ಯಕ. ಇಂದಿನ ಆಧುನಿಕ ಜಗತ್ತಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ದೇಶದಲ್ಲಿ ನಡೆಯುತ್ತಿರುವ ಪ್ರಚಲಿತ ವಿದ್ಯಮಾನಗಳ ಬಗ್ಗೆ ಬೆಳಕು ಚೆಲ್ಲಬೇಕು ಮತ್ತು ಹೊಸ ತಂತ್ರಜ್ಞಾನ ಮತ್ತು ಅವಿಷ್ಕಾರಗಳನ್ನು ಪರಿಚಯಿಸುವ ಕೆಲಸ ಮಾಡಬೇಕಾಗಿದೆ ಎಂದರು.
ಜಿಲ್ಲೆಯಲ್ಲಿ ಮಹಾಮಾರಿ ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವುದನ್ನು ನಿಯಂತ್ರಿಸುವಲ್ಲಿ ಜಿಲ್ಲಾಡಳಿತ ಕೈಗೊಂಡ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೇಂದ್ರ ಸರ್ಕಾರ ಮೆಚ್ಚುಗೆ ವ್ಯಕ್ತಪಡಿಸಿದೆ. ಕೋವಿಡ್-19 ಲಾಕ್‌ಡೌನ್ ಸಂದರ್ಭದಲ್ಲಿ ಜಿಲ್ಲೆಯ ಅಕ್ಕಿಯನ್ನು ದಕ್ಷಿಣ ಭಾರತದ ರಾಜ್ಯಗಳಿಗೆ ಅತಿ ಎಚ್ಚರಿಕೆಯಿಂದ ಸರಬರಾಜು ಮಾಡಲಾಯಿತು.
ಫಾರ್ಮಸ್ಯೂಟಿಕಲ್ ಕ್ಷೇತ್ರದಲ್ಲಿ ಜಿಲ್ಲೆಯಲ್ಲಿ ವರ್ಷಕ್ಕೆ ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ವಹಿವಾಟು ನಡೆಯುತ್ತದೆ, ಮೂರು ದಿನಗಳ ನಡೆಯಲಿರುವ ಕಾರ್ಯಾಗಾರದ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಕೃಷಿ ವಿಜ್ಞಾನ ವಿಶ್ವವಿದ್ಯಾಲಯಗಳ ಶಿಕ್ಷಣ ನಿರ್ದೇಶಕ ಡಾ.ಎಂ.ಜಿ.ಪಾಟೀಲ್ ಮಾತನಾಡಿ, ದೇಶದ ಅಭಿವೃದ್ಧಿಗೆ ಶಿಕ್ಷಕರ ಕೊಡುಗೆ ಅಪಾರವಾಗಿದೆ. ಶಿಕ್ಷಕರು ಮಕ್ಕಳಿಗೆ ಹೊಸ ತಂತ್ರಜ್ಞಾನ ಮೂಲಕ ಬೋಧಿಸಬೇಕಿದೆ, ಶಿಕ್ಷಕರನ್ನು ರಾಷ್ಟç ನಿರ್ಮಾತೃ ಎಂದು ಕರೆಯಲಾಗುತ್ತದೆ. ಸಮಾಜದಲ್ಲಿ ಶಿಕ್ಷಕರಿಗೆ ಅತ್ಯುನತ್ತ ಗೌರವ ನೀಡಲಾಗುತ್ತದೆಂದರು.
ಅಪರ ಜಿಲ್ಲಾಧಿಕಾರಿ ದುರಗೇಶ, ಡಯಟ್ ಕಾಲೇಜ ಪ್ರಾಂಶುಪಾಲ ವೃಷಭೇಂದ್ರಯ್ಯ ಸ್ವಾಮಿ, ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಡಾ.ಟಿ. ರೋಣಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಂ.ಎಸ್.ಗೋನಾಳ, ಚೆನ್ನೆöÊನ ಪ್ಯಾಂಟೆಕ್ ಗ್ರೂಪ್ ಆಫ್ ಕಂಪನಿಗಳ ನಿರ್ದೇಶಕ ಸೆಂಥಿಲ್ ಕುಮಾರ್, ಶ್ರೀನಿವಾಸ, ಜಿಲ್ಲಾ ಛೇಂಬರ್ ಆಫ್ ಕಾರ್ಮಸ್‌ನ ಅಧ್ಯಕ್ಷ ತ್ರಿವಿಕ್ರಮ ಜೋಷಿ ಇತರರು ಉಪಸ್ಥಿತರಿದ್ದರು.
ಸಂಗೀತ ಶಿಕ್ಷಕ ಲಕ್ಷಿö್ಮÃಕಾಂತ ರೆಡ್ಡಿ ಹಾಗೂ ಸಂಗಡಿಗರು ನಾಡಗೀತೆ ಹಾಡಿದರು, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ದೊಡ್ಡಮನಿ ಸ್ವಾಗತಿಸಿದರು, ಮುರಳಿಧರ ಕುಲಕರ್ಣಿ ಕಾರ್ಯಕ್ರಮ ನಿರೂಪಿಸಿದರು. ಯುವ ಸಬಲೀಕರಣ ಮತ್ತು ಕ್ರೀಡೆ ಇಲಾಖೆಯ ಸಹಾಯಕ ನಿರ್ದೇಶಕ ರಾಜು ಬಾವಿ ವಂದಿಸಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Share via
Copy link
Powered by Social Snap