ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೂಸುತ್ರವಾಗಿ ನಡೆಸಿ: ಅಪರ ಜಿಲ್ಲಾಧಿಕಾರಿ ಮಂಜುನಾಥ ಸಲಹೆ.

ಸಿರಿನಾಡ ಸುದ್ದಿ, ಬಳ್ಳಾರಿ: ಸೆ.21ರಿಂದ ಸೆ.28ರವರೆಗೆ ನಡೆಯುವ 10ನೇ ತರಗತಿ ಪೂರಕ ಪರೀಕ್ಷೆಗಳನ್ನು ವಾರ್ಷಿಕ ಪರೀಕ್ಷೆಗಳಂತೆ ಸಹ ಯಾವುದೇ ರೀತಿಯ ಲೋಪಗಳಿಗೆ ಅಸ್ಪದ ಮಾಡಿಕೊಡದೇ ಅತ್ಯಂತ ಸೂಸುತ್ರವಾಗಿ ನಡೆಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಪರೀಕ್ಷೆಗೆ ಕೋವಿಡ್-19 ಪಾಸಿಟಿವ್ ಕಂಡುಬAದ ವಿದ್ಯಾರ್ಥಿಗಳಿಗೆ ನಗರದ ಮೆಡಿಕಲ್ ಡೆಂಟಲ್ ಕಾಲೇಜಿನಲ್ಲಿ ಪ್ರತ್ಯೇಕವಾಗಿ ಪರೀಕ್ಷೆಗಳನ್ನು ಬರೆಯಿಸಬೇಕು. ಜಿಲ್ಲೆಯ 26 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಎಲ್ಲಾ ಕೊಠಡಿಗಳಿಗೆ ಸ್ಯಾನಿಟೈಜರ್ ಮೂಲಕ ಸ್ವಚ್ಚಗೊಳಿಸಬೇಕು ಮತ್ತು ಪ್ರತಿ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ತಪಾಸಣೆ ಮಾಡಿಯೇ ಒಳಬಿಡಬೇಕು ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸಿ.ರಾಮಪ್ಪ ಮಾತನಾಡಿ, ಪರೀಕ್ಷಾ ಕೇಂದ್ರಗಳಲ್ಲಿ ಮೂಲ ಸೌಲಭ್ಯಗಳಾದ ನೀರು, ಗಾಳಿ, ಬೆಳಕು, ವಿದ್ಯುತ್ ವ್ಯವಸ್ಥೆಯನ್ನು ಸರಿಯಾಗಿ ಮಾಡಿಕೊಳ್ಳಿ, ಪರೀಕ್ಷಾ ಕೊಠಡಿಗಳಲ್ಲಿ ಸಿ.ಸಿ.ಟಿವಿಗಳ ಕಾರ್ಯವನ್ನು ಪರೀಶಿಲಿಸಿಕೊಳ್ಳಿ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಇತರೆ ಇಲಾಖೆಗಳ ಸಹಾಯವನ್ನು ಪಡೆದು ಪರೀಕ್ಷಾ ಸಮಯದಲ್ಲಿ ಯಾವುದೇ ಅವ್ಯವಹಾರ ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರವಹಿಸಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು,ಮುಖ್ಯ ಅಧೀಕ್ಷಕರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಕಸ್ಟೋಡಿಯನ್ ಸೇರಿದಂತೆ ಇತರರು ಇದ್ದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Share via
Copy link
Powered by Social Snap