ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಿ – ಶಾಸಕ ಜಿ.ಎನ್.ಗಣೇಶ್.

ಸಿರಿನಾಡ ಸುದ್ದಿ, ಕುರುಗೋಡು: ಸಾರ್ವಜನಿಕರ ಅನುಕೂಲಕ್ಕಾಗಿ ಹಾಗೂ ಮೌಲಭೂತ ಸೌಲಭ್ಯಗಳನ್ನು ಕಲ್ಪಿಸಲು ಸಹಕಾರಿಯಾಗುವ ನೂತನ ಗ್ರಾಪಂ. ಕಟ್ಟಡದ ಕಾಮಗಾರಿ ವೇಗವಾಗಿ ಗುಣಮಟ್ಟದಲ್ಲಿ ನಿರ್ಮಾಣವಾಗಬೇಕು ಎಂದು ಶಾಸಕ ಜೆಎನ್.ಗಣೇಶ್ ತಿಳಿಸಿದರು.
ತಾಲೂಕಿನ ದಮ್ಮೂರು ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಕಾರ್ಯಾಲಯದ ೨೯ ಲಕ್ಷ ರೂಗಳ. ನೂತನ ಕಟ್ಟಡ ಕಾಮಗಾರಿಗೆ ಶುಕ್ರವಾರ ಭೂಮಿ ಪೂಜೆ ನೆರೆವೇರಿಸಿ ಮಾತನಾಡಿ, ಸುಮಾರು ೩೫ ವರ್ಷಗಳಿಂದ ಹಳೆಯ ಚಿಕ್ಕ ಕಟ್ಟಡದಲ್ಲಿ ಕಾರ್ಯನಿರ್ವಹಿಸಿ, ಇತ್ತಿಚಿಗೆ ಗ್ರಂಥಾಲಯದಲ್ಲಿ ನಿರ್ವಹಿಸುವ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಕಾಮಗಾರಿಯನ್ನು ಗುತ್ತಿಗೆದಾರರು ಕಳಪೆ ಮಾಡದೆ ಗುಣಮಟ್ಟದಿಂದ ವಿಶಾಲ ನೂತನ ಮಾದರಿಯಲ್ಲಿ ನಿರ್ಮಿಸಬೇಕು. ಇದಕ್ಕೆ ಅಧಿಕಾರಿಗಳು ಹಾಗೂ ಸಾರ್ವಜನಿಕರ ಸಹಕಾರ ಅಗತ್ಯ ಎಂದರು.
ನಂತರ ತಾಪಂ. ಕಾರ್ಯನಿರ್ವಹಕ ಅಧಿಕಾರಿ ಎಂ.ಬಸಪ್ಪ ಮಾತನಾಡಿದರು.
ಈ ಸಂದರ್ಭದಲ್ಲಿ ತಾಪಂ. ಸದಸ್ಯೆ ಬಿ.ಸುಮಂಗಳ ತಿಮ್ಮರೆಡ್ಡಿ, ನರೇಗಾ ಸಹಾಯಕ ನಿರ್ದೇಶಕ ಹೆಚ್.ಗಣೇಶ್, ಗ್ರಾಪಂ. ಆಡಳಿತ ಅಧಿಕಾರಿ ರಮೇಶ್, ಅಭಿವೃದ್ಧಿ ಅಧಿಕಾರಿ ಮಲ್ಲಿಕಾರ್ಜುನ ಸೇರಿದಂತೆ ಗ್ರಾಮದ ಮುಖಂಡರು ಹಾಗೂ ಗ್ರಾಪಂ. ಸಿಬ್ಬಂದಿಗಳು ಇದ್ದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Share via
Copy link
Powered by Social Snap