ದೇವಲಾಪುರದ ಹೊಸನಗರದ ವ್ಯಕ್ತಿಯೊಬ್ಬರಿಗೆ (50 ವರ್ಷ) ಕೊರೊನಾ ಸೋಂಕು ಧೃಡ.

ಸಿರಿನಾಡ ಸುದ್ದಿ ಕಂಪ್ಲಿ: ತಾಲೂಕಿನ ದೇವಲಾಪುರದ ಹೊಸನಗರದ ವ್ಯಕ್ತಿಯೊಬ್ಬರಿಗೆ (50 ವರ್ಷ) ಕೊರೊನಾ ಸೋಂಕು ಸೋಮವಾರ ರಾತ್ರಿ ದೃಢಪಟ್ಟಿದೆ.
ಸೋಂಕಿತ ವ್ಯಕ್ತಿಯನ್ನು ಬಳ್ಳಾರಿ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮದಲ್ಲಿ ಇದು ಎರಡನೇ ಪ್ರಕರಣವಾಗಿದೆ. ಸೋಂಕಿತ ವ್ಯಕ್ತಿ ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆಗೆ ಬಳ್ಳಾರಿ ಆಸ್ಪತ್ರೆಗೆ ಹೋಗಿದ್ದರು. ಅಲ್ಲಿ ಸ್ವಾಬ್ ತೆಗೆದು ಪರೀಕ್ಷೆಗೆ ಕಳುಹಿಸಲಾಗಿತ್ತು. ವರದಿಯಲ್ಲಿ ವ್ಯಕ್ತಿಗೆ ಕೊರೊನಾ ದೃಢಪಟ್ಟಿದೆ. ಸೋಂಕಿತ ವ್ಯಕ್ತಿ ತಾಯಿ, ಮಗ, ಒಬ್ಬ ಸಂಬ0ಧಿಯನ್ನು ಗ್ರಾಮದ ಮನೆಯಲ್ಲಿಯೇ ಕ್ವಾರಂಟೈನ್ ಮಾಡಲಾಗಿದೆ. ಸೋಂಕಿತ ವ್ಯಕ್ತಿಯ ಮನೆಯಿರುವ ಹೊಸನಗರ ಪ್ರದೇಶದ 11 ಮನೆಗಳನ್ನು ಸೀಲ್‌ಡೌನ್ ಮಾಡಲಾಗಿದೆ.
ತಹಸೀಲ್ದಾರ್ ಎಂ.ರೇಣುಕಾ, ತಾಪಂ ಇಒ ಶ್ರೀಕುಮಾರ್, ಗ್ರಾಪಂ ಅಧ್ಯಕ್ಷ ಗೌಡ್ರ ಸುರೇಶ್‌ಗೌಡ, ಗ್ರಾಮಲೆಕ್ಕಾಧಿಕಾರಿ ವಿಜಯ್‌ಕುಮಾರ್, ಆರೋಗ್ಯ ಅಧಿಕಾರಿ ಡಾ.ರೇವಣ್ಣ ಸಿದ್ದಪ್ಪ, ಪಿಡಿಒ ಕೆ.ಶಶಿಕಾಂತ್ ಸೇರಿದಂತೆ ಅಧಿಕಾರಿಗಳ ತಂಡ ಸೋಂಕಿತ ವ್ಯಕ್ತಿ ಮನೆ ಪ್ರದೇಶಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ಮಾಡಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Share via
Copy link
Powered by Social Snap