ನರೇಗಾ: ಬಾಕಿ ಕಾಮಗಾರಿ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಸೂಚನೆ

ಸಿರಿನಾಡ ಸುದ್ದಿ, ರಾಯಚೂರು: ಮಹಾತ್ಮ ಗಾಂಧಿ ರಾಷ್ಟಿçಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೆತ್ತಿಕೊಂಡಿರುವ ಕಾಮಗಾರಿಗಳಲ್ಲಿ ಬಾಕಿಯುಳಿದವುಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಿ, ಸಂಬ0ಧಿಸಿದ ಇಲಾಖೆಗೆ ಹಸ್ತಾಂತರಿಸುವAತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಲಕ್ಷಿö್ಮಕಾಂತ ರೆಡ್ಡಿ ನಿರ್ದೇಶನ ನೀಡಿದರು.
ಅವರು ಅ.19ರ ಸೋಮವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಹಾತ್ಮ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನರೇಗಾದಡಿ ಈಗಾಗಲೇ ಅಡುಗೆ ಕೋಣೆ, ಶೌಚಾಲಯ, ಬಚ್ಚಲು ಗುಂಡಿ, ಕೋಯ್ಲು, ಕೃಷಿ ಹೊಂಡ ಹಾಗೂ ಅಂಗನವಾಡಿ ಕಟ್ಟಡ ಸೇರಿದಂತೆ ಇನ್ನಿತರ ಹಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ರಾಯಚೂರು ತಾಲೂಕಿನ ಕಲ್ಮಲ ಗ್ರಾಮದಲ್ಲಿ ಗೋಕಟ್ಟೆ ಕಾಮಗಾರಿಗಳು ಬಾಕಿ ಉಳಿದಿವೆ, ಇವುಗಳನ್ನು ಶೀಘ್ರ ಪೂರ್ಣಗೊಳಿಸಿ, ಸಂಬAಧಿಸಿದ ಇಲಾಖೆಗಳಿಗೆ ಹಸ್ತಾಂತರಿಸುವAತೆ ಸೂಚಿಸಿದರು.
ಚಿಕ್ಕಸೂಗೂರು, ಯರಗೇರಾ, ಕಮಲಾಪೂರು ಗ್ರಾಮಗಳಲ್ಲಿ ಬಾಕಿಯಿರುವ ಎಲ್ಲ ಕಾಮಗಾರಿ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು, ಲಿಂಗಸೂಗೂರು ತಾಲೂಕಿನಲ್ಲಿ ಸೋಕಿಟ್ ಕಾಮಗಾರಿಯ ಪ್ರತಿ ಶತ ಪ್ರಗತಿ ಸಾಧಿಸದ ಕಾರಣ ಪಿಡಿಓಗಳಿಗೆ ಶೋಕಾಸ್ ನೋಟಿಸ್ ನೀಡುವಂತೆ ಇದೇ ಸಂದರ್ಭದಲ್ಲಿ ತಿಳಿಸಿದರು.
ಸರ್ಕಾರಿ ಶಾಲೆಗಳಿಗೆ ಮಹಾತ್ಮ ಗಾಂಧಿ ರಾಷ್ಟಿçಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೆತ್ತಿಕೊಂಡಿರುವ ಕಂಪೌAಡ್ ಕಾಮಗಾರಿ ಡಿಸೆಂಬರ್ ಅಂತ್ಯದ ವೇಳೆಗೆ ಪೂರ್ಣಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಕಂಪೌ0ಡ್ ನಿರ್ಮಿಸಿ ಬಣ್ಣ ಬಳಿದು ಕಾಮಗಾರಿ ಪೂರ್ಣಗೊಳಿಸಬೇಕು, ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಕಂಪೌAಡ್ ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸಬೇಕಾಗಿದೆ ಎಂದರು.
ಮಸ್ಕಿ ತಾಲೂಕಿನಲ್ಲಿ ನರೇಗಾ ಯೋಜನೆಯಡಿ ಬಾಕಿ ಇರುವ ಎಲ್ಲ ಕಾಮಗಾರಿಯನ್ನು ಮುಂದಿನ ಸಭೆಯೊಳಗೆ ಪೂರ್ಣಗೊಳಿಸಿ ಪ್ರಗತಿ ಸಾಧಿಸಬೇಕು, ನರೇಗಾ ಯೋಜನೆ ಸಮಪರ್ಕವಾಗಿ ಜಿಲ್ಲೆಯಲ್ಲಿ ಅನುಷ್ಟಾನಗೊಳಿಸಬೇಕಾಗಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದಲ್ಲಿ ಉದೋಗಕ್ಕಾಗಿ ಅರ್ಜಿ ಸಲ್ಲಿಸಿದ ಕೂಲಿ ಕಾರ್ಮಿಕರಿಗೆ 15 ದಿನದೊಳಗಾಗಿ ಜಾಬ್ ಕಾರ್ಡ್ ನೀಡಬೇಕು ಮತ್ತು ಎಲ್ಲ ಪಂಚಾಯತಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರಿಗೆ ಬಾಕಿ ಕೂಲಿ ಪಾವತಿಸಬೇಕೆಂದರು
ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಡಾ.ಟಿ. ರೋಣಿ, ತಾಲೂಕು ಪಂಚಾಯತ್‌ಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು, ತಾಂತ್ರಿಕ ಸಹಾಯಕರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Share via
Copy link
Powered by Social Snap