ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ

ಸಿರಿನಾಡ ಸುದ್ದಿ, ರಾಯಚೂರು: ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಪಿಕಳಿಹಾಳ ಗ್ರಾಮಕ್ಕೆ ಹೊಸದಾಗಿ ನ್ಯಾಯಬೆಲೆ ಅಂಗಡಿಗೆ ಮಂಜೂರಾತಿ ನೀಡಲಾಗಿದೆ.
ಆಸಕ್ತರು ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ತಹಶೀಲ್ದಾರ ಕಾರ್ಯಾಲಯ, ಲಿಂಗಸೂಗೂರು ಮತ್ತು ಉಪ ನಿರ್ದೇಶಕರ ಕಾರ್ಯಾಲಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ರಾಯಚೂರು ಇವರನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.
ಇದೇ ಸೆ.30ರಂದು ಸಂಜೆ.5 ಗಂಟೆಯೊಳಗೆ ಎಲ್ಲ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕೆಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Share via
Copy link
Powered by Social Snap