ನ.30ರಿಂದ ಭತ್ತ ಖರೀದಿಗೆ ನೋಂದಣಿ:ಅಪರ ಜಿಲ್ಲಾಧಿಕಾರಿ ಮಂಜುನಾಥ

ಬಳ್ಳಾರಿ: ಈ ಸಾಲಿನಲ್ಲಿ ಕನಿಷ್ಠ ಬೆಂಬಲ ಯೋಜನೆ ಅಡಿ ಭತ್ತ ಖರೀದಿಗೆ ನ.30ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದ್ದು,ಡಿ.30ರವರೆಗೆ ನಡೆಯಲಿದೆ. ರೈತರಿಂದ ಪ್ರತಿ ಎಕರೆಗೆ 16 ಕ್ವಿಂಟಾಲ್‍ಗಳಂತೆ ಗರಿಷ್ಠ 40 ಕ್ವಿಂಟಾಲ್‍ಗಳನ್ನು ಖರೀದಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ 2020-21ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆ ಕಾರ್ಯಾಚರಣೆಗೆ ಸಂಬಂಧಿಸಿದ ಜಿಲ್ಲಾ ಟಾಸ್ಕ್‍ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿ ಭತ್ತ ಖರೀದಿಸಲು ಜಿಲ್ಲೆಯಲ್ಲಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತವನ್ನು ಸಂಗ್ರಹಣಾ ಮಂಡಳಿ ಏಜೆನ್ಸಿಯನ್ನಾಗಿ ನೇಮಿಸಲಾಗಿದ್ದು, ಬಳ್ಳಾರಿ,ಸಿರಗುಪ್ಪ,ಕಂಪ್ಲಿಗಳಲ್ಲಿ ಖರೀದಿ ಕೇಂದ್ರಗಳನ್ನು ತೆಗೆಯಲಾಗುತ್ತದೆ. ರೈತರು ಖರೀದಿ ಕೇಂದ್ರಗಳಿಗೆ ಬಂದು ಅಲ್ಲಿಯೇ ಆನ್‍ಲೈನ್‍ಲ್ಲಿಯೇ ನೋಂದಣಿ ಮಾಡಬೇಕು ಎಂದು ಹೇಳಿದ ಎಡಿಸಿ ಮಂಜುನಾಥ ಅವರು ಕಳೆದ ವರ್ಷ 47 ಸಾವಿರ ಕ್ವಿಂಟಾಲ್ ಭತ್ತ ಖರೀದಿ ಕೇಂದ್ರಗಳ ಮೂಲಕ ಖರೀದಿಯಾಗಿತ್ತು;ಈ ವರ್ಷ 60 ಸಾವಿರ ಕ್ವಿಂಟಾಲ್ ಖರೀದಿಯಾಗುವ ನಿರೀಕ್ಷೆ ಇದೆ ಎಂದರು.
ಜಿಲ್ಲೆಯಲ್ಲಿ ಕಾರ್ಯನಿರತವಾಗಿರುವ ಅಕ್ಕಿಗಿರಣಿಗಳನ್ನು ಭತ್ತ ಖರೀದಷಿ ಕಾರ್ಯಕ್ಕೆ ನೋಂದಾಯಿಸಿಕೊಂಡು ಅಕ್ಕಿಗಿರಣಿಗಳ ಹಲ್ಲಿಂಗ್ ಹಾಗೂ ಶೇಖರಣಾ ಸಾಮಥ್ರ್ಯಕ್ಕನುಗುಣವಾಗಿ ಸಂಗ್ರಹಣಾ ಕಾರ್ಯ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸರಕಾರವು ಸಾಮಾನ್ಯ ಭತ್ತಕ್ಕೆ ಕ್ವಿಂಟಾಲ್‍ಗೆ 1868 ರೂ. ಮತ್ತು ಗ್ರೇಡ್-ಎ ಭತ್ತಕ್ಕೆ 1888 ರೂ.ನಿಗದಿಪಡಿಸಲಾಗಿದೆ ಎಂದು ವಿವರಿಸಿದ ಎಡಿಸಿ ಮ ಂಜುನಾಥ ಅವರು ಬೆಂಬಲ ಬೆಲೆ ಯೋಜನೆ ಅಡಿ ಭತ್ತ ಖರೀದಿ ಬಗ್ಗೆ ಜಿಲ್ಲಾ ವ್ಯಾಪ್ತಿಯಲ್ಲಿ ರೈತರಿಗೆ ಅಗತ್ಯ ಪ್ರಚಾರ ಮಾಡುವಂತೆ ಸೂಚಿಸಿದರು.
ಜಿಲ್ಲಾಮಟ್ಟದಲ್ಲಿ ಗುಣಮಟ್ಟ ಪರಿಶೀಲನೆಗಾಗಿ ಅಸ್ಸೇಯರ್ ನೇಮಕಾತಿ ಮತ್ತು ತರಬೇತಿ ಏರ್ಪಡಿಸುವಂತೆ ತಿಳಿಸಿದರು.
ಪ್ರತಿದಿನ ಖರೀದಿಸುವ ಕೃಷಿ ಉತ್ಪನ್ನಗಳ ವಿವರಗಳನ್ನು ಖರೀದಿ ಏಜೆನ್ಸಿ ಪತ್ರದಲ್ಲಿ ನೀಡಿರುವ ವಹಿಯಲ್ಲಿ ದಾಖಲಿಸಬೇಕು. ಈ ಬಗ್ಗೆ ಕೃಷಿ ಉತ್ಪನ್ನ ಖರೀದಿ ವಹಿ ನಿರ್ವಹಿಸಬೇಕು ಎಂದರು.
ಗುಣಮಟ್ಟ ಪರಿಶೀಲನೆ ಹೆಸರಿನಲ್ಲಿ ರೈತರಿಗೆ ಯಾವುದೇ ಅನಾನೂಕುಲವಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದ ಅವರು ಪ್ರತಿ ಖರೀದಿ ಕೇಂದ್ರಗಳಿಗೆ ನುರಿತ ಗುಣಮಟ್ಟ ಪರೀಕ್ಷಕರನ್ನು ನೇಮಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಇನ್ನೀತರ ವಿಷಯಗಳ ಕುರಿತು ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಆಹಾರ,ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಶ್ರೀಧರ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Share via
Copy link
Powered by Social Snap