ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿಗಳ ಆಹ್ವಾನ

ಸಿರಿನಾಡ ಸುದ್ದಿ, ಬಳ್ಳಾರಿ: ಕರ್ನಾಟಕ ಜಾನಪದ ಅಕಾಡೆಮಿಯು 2019ಜನೆವರಿಯಿಂದ ಡಿ.31ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣ ಗೊಂಡಿರುವ ಕನಿಷ್ಟ 150 ಪುಟಗಳ ಮಿತಿಯಲ್ಲಿರುವ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜನಪದ ಗದ್ಯ,ಜನಪದ ಪದ್ಯ,ಜನಪದ ವಿಚಾರ-ವಿಮರ್ಶ- ಸಂಶೋಧನ, ಜನಪದ ಸಂಕೀರ್ಣ ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಿದೆ. ಲೇಖಕರು/ ಪ್ರಕಾಶಕರು/ ಸಂಪಾದಕರು 4 ಕೃತಿಗಳನ್ನು ದ್ವಿಪ್ರತಿ ಬಿಲ್ಲಿನೊಂದಿಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು- 560002 ಇವರಿಗೆ ಅ.25 ರೊಳಗೆ ಖುದ್ದಾಗಿ, ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸಿ ಕೊಡಬಹುದು ಎಂದು ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Share via
Copy link
Powered by Social Snap