ವಿಎಸ್‌ಕೆ ವಿವಿ ಅತಿಥಿ ಉಪನ್ಯಾಸಕರ ನೇಮಕಾತಿ ಸಂದರ್ಶನ ಮಂದೂಡಿಕೆ

ಸಿರಿನಾಡ ಸುದ್ದಿ, ಬಳ್ಳಾರಿ: 2020-21ನೇ ಶೈಕ್ಷಣಿಕ ಸಾಲಿನ ವಿಶ್ವವಿದ್ಯಾಲಯದ ಮುಖ್ಯ ಆವರಣ ಹಾಗೂ ಸ್ನಾತಕೋತ್ತರ ಕೇಂದ್ರಗಳ ಸ್ನಾತಕೋತ್ತರ ವಿಭಾಗಗಳ ಅತಿಥಿ ಉಪನ್ಯಾಸಕರ ನೇಮಕಾತಿಗೆ ವಿಭಾಗವಾರು ಸೆ.28ರಂದು ನಡೆಯಬೇಕಿದ್ದ ಮೌಖಿಕ ಸಂದರ್ಶನವನ್ನು ಅ.01ಕ್ಕೆ ಮುಂದೂಡಲಾಗಿದೆ ಎಂದು ವಿವಿ ಆಢಳಿತ ಪ್ರಕಟಣೆಯಲ್ಲಿ ತಿಳಿಸಿದೆ.
ಸೆ.29 ರಿಂದ ಸೆ.30 ರವರೆಗೆ ನಡೆಯಬೇಕಿದ್ದ ಸಂದರ್ಶನದಲ್ಲಿ ಯಾವುದೇ ಬದಲಾವಣೆಯಿರುವುದಿಲ್ಲ ಸಂದರ್ಶನಗಳು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ನಡೆಯಲಿವೆ ಎಂದು ತಿಳಿಸಿದ್ದಾರೆ.
ಈ ಮಾಹಿತಿಯು ವಿಶ್ವವಿದ್ಯಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ವಿವಿ ಆಡಳಿತ ತಿಳಿಸಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Share via
Copy link
Powered by Social Snap