ವಿಜಯನಗರ ಸಾಮ್ರಾಜ್ಯದ ವೈಭವ ಸಾರುವ ಹಂಪಿ ಉತ್ಸವಕ್ಕೆ ಚಾಲನೆ

ಹಂಪಿ: ವಿಜಯನಗರ ಸಾಮ್ರಾಜ್ಯದ ವೈಭವ ಸಾರುವ ಹಂಪಿ ಉತ್ಸವಕ್ಕೆ ಶುಕ್ರವಾರ ಸಂಜೆ ಅರಣ್ಯ,ಪರಿಸರ,ಜೀವಿಶಾಸ್ತ್ರ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಸ್.ಆನಂದಸಿಂಗ್ ಅವರು ಉದ್ಧಾನ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಚಾಲನೆ ನೀಡಿದರು.
ಪ್ರತಿ ರ‍್ಷ ಮೂರು ದಿನಗಳ ಕಾಲ ವಿಜಯನಗರ ಸಾಮ್ರಾಜ್ಯದ ಗತವೈಭವವನ್ನು ಇಂದಿನ ಪೀಳಿಗೆಗೆ ಪರಿಚಯಿಸಲು ಅತ್ಯಂತ ವಿಜೃಂಭಣೆಯಿಂದ ರಾಜ್ಯ ಸರಕಾರವು ಹಂಪಿ ಉತ್ಸವವನ್ನು ನಡೆಸುತ್ತಿತ್ತು. ಈ ಬಾರಿ ಕೊವಿಡ್-19ನಿಂದಾಗಿ ಸರಳ,ಸಾಂಕೇತಿಕವಾಗಿ ಕೋವಿಡ್ ಮರ‍್ಗಸೂಚಿಗಳ ಅನುಸಾರ ಆಚರಿಸಲಾಗುತ್ತಿದೆ.
ಈ ಸಂರ‍್ಭದಲ್ಲಿ ಸಂಸದರಾದ ವೈ. ದೇವೇಂದ್ರಪ್ಪ,ಶಾಸಕರಾದ ಎಂ.ಎಸ್.ಸೋಮಲಿಂಗಪ್ಪ, ಹೊಸಪೇಟೆ ತಾಲ್ಲೂಕ್ ಪಂಚಾಯತ್ ಅಧ್ಯಕ್ಷರಾದ ಎನ್.ನಾಗವೇಣಿ ಬಸವರಾಜ್, ತಾಲೂಕು ಪಂಚಾಯತ್ ಸದಸ್ಯ ಪಾಲಪ್ಪ, ಕಮಲಾಪುರ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಸೈಯದ್ ಅಮಾನುಲ್ಲಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನರ‍್ದೇಶಕರಾದ ಎಸ್. ರಂಗಪ್ಪ, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಎಸ್ಪಿ ಸೈದುಲು ಅಡಾವತ್, ಜಿಪಂ ಸಿಇಒ ಕೆ.ಆರ್.ನಂದಿನಿ,ಹೊಸಪೇಟೆ ಸಹಾಯಕ ಆಯುಕ್ತ ಶೇಖ್ ತನ್ವೀರ್ ಅಸೀಫ್, ಪ್ರೊಬೇಷನರಿ ಐಎಎಸ್‌ ರಾಹುಲ್ ಸಂಕನೂರು,ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಮತ್ತಿತರರು ಇದ್ದರು.
ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನರ‍್ದೇಶಕ ಸಿದ್ಧಲಿಂಗೇಶ ರಂಗಣ್ಣನವರ್ ಸ್ವಾಗತಿಸಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Share via
Copy link
Powered by Social Snap