ಕರ್ನಾಟಕದಲ್ಲಿ ಇನ್ನೂ 4 ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು : ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಮೇಲ್ಮೈಸುಳಿಗಾಳಿ ತೀವ್ರತೆಯೂ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗಲಿದ್ದು, ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿಯಲ್ಲಿ ಇಂದು ಆರೆಂಜ್ ಅಲರ್ಟ್, ಧಾರವಾಡ ಹಾಗೂ ಹಾವೇರಿಯಲ್ಲಿ ಇಂದು ಮತ್ತು ಸೆ. 25 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೀದರ್ ನಲ್ಲಿ, ಕಲಬುರಗಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಹಾಸನ, ಕೊಡಗುಉ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Share via
Copy link
Powered by Social Snap