ಮತ್ತೆ 3-4 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ.. ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ಬೆಂಗಳೂರು: ಈಗಾಗಲೇ ಮೂರ್ನಾಲ್ಕು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಮುಂದಿನ 3-4 ದಿನಗಳ ಕಾಲ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಅಕ್ಟೋಬರ್​ 15 ರವರೆಗೆ ಆರೆಂಜ್​ ಅಲರ್ಟ್​ ಘೋಷಣೆ ಮಾಡಲಾಗಿದ್ದು ಈ ಜಿಲ್ಲೆಗಳಲ್ಲಿ ನಾಳೆ ಮತ್ತು ನಾಡಿದ್ದು ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಇನ್ನು ಬೀದರ್, ಕಲ್ಬುರ್ಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ಗದಗ್, ಕೊಪ್ಪಳ, ಹಾವೇರಿ, ಬೆಳಗಾಂ, ಧಾರವಾಡ, ವಿಜಯಪುರ ಜಿಲ್ಲೆಗಳಿಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಈ ಹಿನ್ನೆಲೆ ಈ ಎಲ್ಲಾ ಜಿಲ್ಲೆಗಳಿಗೆ ಎರಡು ದಿನ ಆರೆಂಜ್​ ಅಲರ್ಟ್​ ಘೋಷಣೆ ಮಾಡಲಾಗಿದೆ.
ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿತ್ರದುರ್ಗ, ಹಾಸನ, ಕೊಡಗು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು ಇಂದಿನಿಂದ ಅಕ್ಟೋಬರ್​ 14ರವರೆಗೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ. ಬೆಂಗಳೂರಲ್ಲೂ ಇಂದು ಮತ್ತು ನಾಳೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇಂದು ಕರಾವಳಿ ಜಿಲ್ಲೆಗಳಾದ ಉತ್ತರ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಹುಕ್ಕೇರಿ, ಬೆಳಗಾವಿಯಲ್ಲಿ 13 ಸೆಂ.ಮೀ ಮಳೆಯಾಗಿದೆ. ಬಾಗಲಕೋಟೆಯಲ್ಲಿ 10 ಸೆಂಟಿಮೀಟರ್, ಕೊಪ್ಪಳ 9 ಸೆಂ.ಮೀ ಮಳೆಯಾಗಿದೆ. ಬಂಗಾಳ ಉಪಸಾಗರದ ಪಶ್ಚಿಮ ಭಾಗದಲ್ಲಿ ಡೆಪ್ರೆಶನ್ ತೀವ್ರಗೊಂಡು ನಾಳೆ ನಾಡಿದ್ದು ವ್ಯಾಪಕ ಮಳೆಯಾಗೋ ಸಾಧ್ಯತೆ ಇದೆ. ಟ್ರಫ್ ಕೂಡ 17 ಡಿಗ್ರಿ ಉತ್ತರ ಅಕ್ಷಾಂಶದ್ದು 3.1 ಮತ್ತು 5.8 ಕಿ.ಮೀ ಎತ್ತರದಲ್ಲಿದೆ. ಇದರ ಪ್ರಭಾವದಿಂದ ಕರ್ನಾಟಕ ಕರಾವಳಿಯಲ್ಲಿ ಅಕ್ಟೋಬರ್ 13 ಮತ್ತು 14 ರಂದು ವ್ಯಾಪಕ ಮಳೆಯಾಗೋ ಸಾಧ್ಯತೆ ಇದೆ. ಇನ್ನು ಅಕ್ಟೋಬರ್ 15, 16 ಎಲ್ಲಾ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಜಂಟಿ ನಿರ್ದೇಶಕ/ ವಿಜ್ಞಾನಿ ಸಿ.ಎಸ್​. ಪಾಟೀಲ್​ ಮಾಹಿತಿ ನೀಡಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Share via
Copy link
Powered by Social Snap