ರಾಜ್ಯದಲ್ಲಿ ಸೆ.14ರಿಂದ ಸೆ.17ರವರೆಗೆ ಭಾರೀ ಮಳೆ .

ಬೆಂಗಳೂರು : ರಾಜ್ಯದಲ್ಲಿ ಸೆಪ್ಟೆಂಬರ್ 14ರಿಂದ ಸೆಪ್ಟೆಂಬರ್ 17ರವರೆಗೆ ಭಾರೀ ಮಳೆಯಾಗಲಿದೆ. ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆಯಾಗಲಿದೆ ಎಂಬುದಾಗಿ ತಿಳಿಸಿರುವ ಹವಾಮಾನ ಇಲಾಖೆ, ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಈ ಕುರಿತಂತೆ ಮಾಹಿತಿ ನೀಡಿರುವ ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕರಾದ ಸಿಎಸ್ ಪಾಟೀಲ್, ರಾಜ್ಯದಲ್ಲಿ ಕರಾವಳಿ ಭಾಗದಲ್ಲಿ ಇಂದಿನಿಂದ ಸೆಪ್ಟೆಂಬರ್ 17ರವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಅದರಲ್ಲೂ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವುದಾಗಿ ತಿಳಿಸಿದ್ದಾರೆ.
ಇನ್ನೂ ಸೆ.14ರಿಂದ ಸೆ.17ರವರೆಗೆ ಮುಂಜಾಗ್ರತಾ ಕ್ರಮವಾಗಿ ರೆಡ್ ಅಲರ್ಟ್ ಘೋಷಿಸಿದ್ದು, ಕಲಬುರ್ಗಿ, ಯಾದಗಿರಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 17ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿಲಾಗಿದೆ. ಹಾಸನ, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿಯೂ ಭಾರೀ ಮಳೆಯಾಗುವುದಾಗಿ ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Share via
Copy link
Powered by Social Snap